Telegram Join My Telegram      WhatsApp    Join My WhatsApp

ನಾಳೆ sslc ಫಲಿತಾಂಶ ಪ್ರಕಟಣೆ

ಬೆಂಗಳೂರು: ನಾಳೆ ಎಸ್‌ಎಸ್‌ಎಲ್‌ಸಿ ಫಲಿತಾಂಶ (SSLC Result) ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಹೇಳಿದ್ದಾರೆ.

ನಾಳೆ ಮಧ್ಯಾಹ್ನ 12 ಗಂಟೆಗೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಲಾಗುತ್ತದೆ. ಸುದ್ದಿಗೋಷ್ಠಿಯ ಬಳಿಕ ಇಲಾಖೆಯ ವೆಬ್‌ಸೈಟ್‌ನಲ್ಲಿ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ.

 

ಕೋರ್ಟ್‌ ಆದೇಶದಂತೆ ಈ ಬಾರಿ ಹಿಂದಿ ಭಾಷೆಯ ಪರೀಕ್ಷೆಗೆ ಅಂಕ ನೀಡಲಾಗಿದೆ. ಮುಂದಿನ ವರ್ಷದಿಂದ ಗ್ರೇಡ್ ವ್ಯವಸ್ಥೆ ನಿಯಮ ಜಾರಿಗೆ ತೀರ್ಮಾನ ಮಾಡಲಾಗಿದೆ. ಹಿಂದಿಗೆ ಅಂಕ ನೀಡುವ ಬಗ್ಗೆ ಸಿಎಂ ಸಿದ್ದರಾಮಯ್ಯನವರ ಗಮನಕ್ಕೆ ತರಲಾಗಿದೆ ಎಂದು ವಿವರಿಸಿದರು.ಫಲಿತಾಂಶ ವೀಕ್ಷಿಸಲು ಅಧಿಕೃತ ವೆಬ್‌ಸೈಟ್‌ಗಳು

ನೀವು ಈ ಕೆಳಗಿನ ವೆಬ್‌ಸೈಟ್‌ಗಳಲ್ಲಿ ನಿಮ್ಮ ಫಲಿತಾಂಶವನ್ನು ವೀಕ್ಷಿಸಬಹುದು:

karresults.nic.in

kseab.karnataka.gov.in

sslc.karnataka.gov.in

ಫಲಿತಾಂಶವನ್ನು ಪರಿಶೀಲಿಸುವ ವಿಧಾನ

ಮೇಲೆ ತಿಳಿಸಿದ ಯಾವುದಾದರೂ ಒಂದು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.

ಹೋಮ್ ಪೇಜ್‌ನಲ್ಲಿರುವ “SSLC Exam Result 2026” ಲಿಂಕ್ ಮೇಲೆ ಕ್ಲಿಕ್ ಮಾಡಿ.

ನಿಮ್ಮ ನೋಂದಣಿ ಸಂಖ್ಯೆ (Registration Number) ಮತ್ತು ಜನ್ಮ ದಿನಾಂಕವನ್ನು (Date of Birth) ನಮೂದಿಸಿ.

‘Submit’ ಬಟನ್ ಒತ್ತಿದ ತಕ್ಷಣ ನಿಮ್ಮ ಅಂಕಪಟ್ಟಿ ಪರದೆಯ ಮೇಲೆ ಕಾಣಿಸುತ್ತದೆ.

ಮುಂದಿನ ಬಳಕೆಗಾಗಿ ಅದನ್ನು ಡೌನ್‌ಲೋಡ್ ಮಾಡಿ ಪ್ರಿಂಟ್ ತೆಗೆದುಕೊಳ್ಳಿ.

 

Leave a Comment